Sunday, August 23, 2026

BDA Apartments

Home Front Page ನಾಳೆ ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ…

ನಾಳೆ ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ…

ಮೈಸೂರು, ನವೆಂಬರ್,23,2020(www.justkannada.in) ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು ಈ ಹಿನ್ನೆಲೆ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.kannada-journalist-media-fourth-estate-under-loss

ನವೆಂಬರ್ 24 ಹಾಗೂ ನವೆಂಬರ್ 25ರಂದು ಮೈಸೂರು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ನಾಳೆ ಮೈಸೂರಿಗೆ ಆಗಮಿಸಲಿರುವ ಸಿಎಂ ಬಿಎಸ್ ವೈ, ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಪೊಲೀಸ್ ಇಲಾಖೆಯ 108 ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನಂತರ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಬಿಎಸ್ ವೈ ನ.25ರಂದು ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸುತ್ತೂರು ಗ್ರಾಮದೇವತೆ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸುತ್ತೂರು ಅಥಿತಿ ಗೃಹ ಹಾಗೂ ಇತರ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸಲಿದ್ದು ಬಳಿಕ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಿಎಸ್ ವೈ ಮುಡುಕುತೊರೆಗೆ ಭೇಟಿ ನೀಡಿ ಮುಡುಕುತೊರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.CM BS Yeddyurappa - Mysore –tour-tomorrow

ನಂತರ ತಲಕಾಡು ಪಂಚಲಿಂಗೇಶ್ವರ ದರ್ಶನ ಸಂಬಂಧ ಸಭೆ ನಡೆಸಿ, ಸಭೆ ಬಳಿಕ ಹೆಲಿಕ್ಯಾಪ್ಟರ್ ನಲ್ಲಿ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಬಿಎಸ್ ವೈ ಪ್ರಯಾಣ ಬೆಳೆಸಲಿದ್ದಾರೆ.

Key words CM BS Yeddyurappa – Mysore –tour-tomorrow