Saturday, September 19, 2026

BDA Apartments

Home Front Page ನೆರೆ ಪರಿಹಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದ ಸಿಎಂ ಬಿ.ಎಸ್ ಯಡಿಯೂರಪ್ಪ: ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ…

ನೆರೆ ಪರಿಹಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದ ಸಿಎಂ ಬಿ.ಎಸ್ ಯಡಿಯೂರಪ್ಪ: ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ…

ಹುಬ್ಬಳ್ಳಿ,ಅ,26,2019(www.justkannada.in): ರಾಜ್ಯದಲ್ಲಿ  ನೆರೆ ಪರಿಹಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ.  ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ಸಿದ್ಧರಾಮಯ್ಯ ವಿರುದ್ದ ಹರಿಹಾಯ್ದ ಸಿಎಂ ಬಿಎಸ್ ವೈ,  ಸಿದ್ಧರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರಾದ ಮೇಲೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಸಿದ್ಧರಾಮಯ್ಯರಿಗೆ ವೀರ್ ಸಾವರ್ಕರ್ ಬಗ್ಗೆ ಎಬಿಸಿಡಿಯಷ್ಟು ಗೊತ್ತಿಲ್ಲ.  ಅಲ್ಲದೆ ಸ್ಪೀಕರ್ ಬಗ್ಗೆ ಏಕವಚನದಲ್ಲಿ ಹಗುರವಾಗಿ ಮಾತನಾಡುತ್ತಾರೆ. ಹೀಗಾಗಿ ಸಿದ್ಧರಾಮಯ್ಯ ನಾಡಿನ ಜನರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Key words: CM BS Yeddyurappa – no shortage -funds  – hubli