ಹುತಾತ್ಮ ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ…

ಬೆಂಗಳೂರು,ಫೆ,2020(www.justkannada.in) ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧ ಗುರು ಅವರ ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಫೆಬ್ರವರಿ 14 ರಂದು ನಡೆದ ಪುಲ್ವಾಮಾ ಉಗ್ರ ದಾಳಿಯ ವೇಳೆ ಹುತಾತ್ಮರಾದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು  ಗುಡಿಗೆರೆ ಗ್ರಾಮದ ಸಿಆರ್ ಪಿಎಫ್ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ 14ಕ್ಕೆ ಯೋಧ ಗುರು ಹುತಾತ್ಮರಾಗಿ ಒಂದು ವರ್ಷ ಕಳೆದಿದೆ. ಈ ನಡುವೆ ಹುತಾತ್ಮರಾದ ಯೋಧ ಅವರ ಸ್ಮಾರಕ ನಿರ್ಮಾಣ ಮಾಡುವ ಭರವಸೆ ನೀಡಲಾಗಿತ್ತು. ಹೀಗಾಗಿ ಸ್ಮಾರಕ ನಿರ್ಮಾಣಕ್ಕೆ ಮಂಡ್ಯ ಜಿಲ್ಲಾಧಿಕಾರಿ ಹೆಸರಿಗೆ 25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಿಎಸ್ ವೈ ಸೂಚಿಸಿದ್ದಾರೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಹುತಾತ್ಮ ಯೋಧ ಗುರು ಅವರ ಕುಟುಂಬಸ್ಥರು. ಸಿಎಂ ಆದೇಶ ಸಂತಸ ತಂದಿದೆ. ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

Key words: CM BS Yeddyurappa- orders -release -grant – construction –soldier-guru-statue