Sunday, August 9, 2026

BDA Apartments

Home Front Page ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಮೇ,27,2021(www.justkannada.in):  ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತು ಭಾರಿ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಯಾರೋ ಎಲ್ಲಿಗೋ ಹೋದವರಿಗೆ ಉತ್ತರ ಕೊಟ್ಟಿದ್ದಾರೆ. ಹೋಗಿ ಬಂದವರು ಅಲ್ಲಿಯೇ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.jk

ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ದೆಹಲಿಗೆ  ಹೋಗಿ ಬಂದರೆ ಅರ್ಥವಿಲ್ಲ. ದೆಹಲಿಗೆ ಹೋದವರಿಗೆ ಉತ್ತರ ಕೊಟ್ಟು ಕಳಿಸಿದ್ದಾರೆ. ಕೊರೋನಾ ನಿಯಂತ್ರಿಸುವುದಷ್ಟೇ ನನ್ನ ಗುರಿ. ಸದ್ಯ ನನ್ನ ಆದ್ಯತೆ ಕೋವಿಡ್ ನಿಯಂತ್ರಣಕ್ಕಷ್ಟೇ ಆಗಿದೆ. ಬೇರೆ ವಿಷಯ ನನ್ನ ಮುಂದೆ ಇಲ್ಲ.  ಎಂದು ಹೇಳುವ ಮೂಲಕ ವಿರೋಧಿಗಳಿಗೆ ಟಕ್ಕರ್ ಕೊಟ್ಟಿದ್ದಾರೆ.

ಕೋವಿಡ್ ಎದುರಿಸುವುದು ಮೊದಲ ಕೆಲಸ, ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ. ಒಟ್ಟಾಗಿ ಸಚಿವರು, ಶಾಸಕರು ಕೋವಿಡ್ ಎದುರಿಸಬೇಕು  ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: CM –BS yeddyurappa- react-leadership change – state.