ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂ ಬಿಎಸ್ ವೈಗೆ ಮನವಿ

 

ಬೆಂಗಳೂರು,ಮೇ,26,2021(www.justkannada.in):  ಕೊರೋನಾ 2ನೇ ಅಲೆ ಲಾಕ್ ಡೌನ್ ನಿಂದಾಗಿ ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಇದರಿಂದ ಖಾಸಗಿ ಶಾಲಾ ಶಿಕ್ಷಕರಿಗೆ ವೇತನವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಹೀಗಾಗಿ ಖಾಸಗಿ ಶಾಲೆಗಳ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ವಿಧಾನಪರಿಷತ್ ಸದಸ್ಯರು ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.jk

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನೇತೃತ್ವದಲ್ಲಿ ಪರಿಷತ್ ಸದಸ್ಯರು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.

ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಸಚಿವ ಎಸ್.ಸುರೇಶ್ ಕುಮಾರ್‌ ಮುಖ್ಯಮಂತ್ರಿಗಳನ್ನು ಮನವಿ ಮಾಡಿದ್ದಾರೆ.

Key words: CM BS Yeddyurappa- requests – announce -special package – private school -teachers