ಸಂಜೆ 6ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ ಬಿಎಸ್ ವೈ…

ಬೆಂಗಳೂರು,ಜನವರಿ,2,2021(www.justkannada.in):  ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಿಢೀರ್ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.jk

ಸಂಜೆ 6 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದು ವಿಧಾನಸೌಧದಲ್ಲಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಸ್ ಟಿಗೆ ಕುರುಬ ಸಮುದಾಯ ಸೇರಿಸುವಂತೆ ಆಗ್ರಹಿಸಿ ಪಾದಯಾತ್ರೆ ಮಾಡಲಾಗುತ್ತಿದೆ. ಹಾಗೆಯೇ ಪಂಚಮಶಾಲಿ ಸಮಾಜವನ್ನ 2ಎಗೆ ಸೇರಿಸುವಂತೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರ ನಡೆಯುತ್ತಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.CM BS Yeddyurappa-  special -cabinet meeting - 6 pm.

ಹಾಗೆಯೇ ಸಚಿವ ಸಂಪುಟ ಸಭೆಯಲ್ಲಿ ಸಭಾಪತಿ ಬಗ್ಗೆಯೂ ಚರ್ಚೆ ನಡೆಯಲಿದ್ದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಬಿಎಸ್ ವೈ ಕರೆದಿರುವ ದಿಢೀರ್ ಸಭೆ ಸಾಕಷ್ಟು ಕುತೂಹಲವನ್ನುಂಟು ಮಾಡಿದೆ.

Key words: CM BS Yeddyurappa-  special -cabinet meeting – 6 pm.