Sunday, August 2, 2026

BDA Apartments

Home Front Page ಬೂಕನಕೆರೆ ಗ್ರಾಮದೇವತೆ ಮತ್ತು ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ..

ಬೂಕನಕೆರೆ ಗ್ರಾಮದೇವತೆ ಮತ್ತು ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ..

ಮಂಡ್ಯ,ಜು,27,2019(www.justkannada.in): ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಹುಟ್ಟೂರು  ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮಕ್ಕೆ ಆಗಿಮಿಸಿದ ಬಿಎಸ್ ಯಡಿಯೂರಪ್ಪ ತಮ್ಮ ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನಿಂದ ಮಂಡ್ಯಕ್ಕೆ ಆಗಮಿಸಿ ಅಲ್ಲಿದ ರಸ್ತೆ ಮೂಲಕ ಬೂಕನಕೆರೆ ಗ್ರಾಮಕ್ಕೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ, ಮನೆದೇವರಾದ ಕಾಪರಹಳ್ಳಿ ಗವಿಮಠ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ  ಬೂಕನಕೆರೆ ಗ್ರಾಮದೇವತೆ ಗೋಗಾಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದಾದ ಬಳಿಕ ಗ್ರಾಮದಲ್ಲಿನ ತಮ್ಮ ಮನೆಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಿಎಸ್ ವೈಗೆ ಜಯಕಾರ ಹಾಕುವ ಮೂಲಕ ಘೋಷಣೆ ಕೂಗಿದರು.

Key words: CM BS Yeddyurappa – special worship-Bukanekare- village -god