ವಿಧಾನಸೌಧಧ ಕಚೇರಿಗೆ ದಿಢೀರ ಭೇಟಿ ನೀಡಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಿಎಂ ಬಿಎಸ್ ಯಡಿಯೂರಪ್ಪ….

ಬೆಂಗಳೂರು,ಆ,1,2019(www.justkannada.in):  ವಿಧಾನಸೌಧದಲ್ಲಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದೇ ಇರುವ ಅಧಿಕಾರಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಕ್ಲಾಸ್ ತೆಗೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ಸ್ವಿಕೃತಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,  ಕೆಲವು ಗೈರಾದ ಅಧಿಕಾರಿಗಳ ಮೇಲೆ ಸಿಟ್ಟಿಗೆದ್ದಿದ್ದಾರೆ. ಸರಿಯಾದ ಸಮಯಕ್ಕೆ ಬಾರದ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಜತೆಗೆ ಇನ್ನು ಮುಂದೆ ಎಲ್ಲರೂ ಸಮಯಕ್ಕೆ ಸರಿಯಾಗಿ ತಮ್ಮ ಕಚೇರಿಯಲ್ಲಿರಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ  ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದು ಸಮಯಕ್ಕೆ ಸರಿಯಾಗಿ ಬರದೇ ಇದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

Key words: CM BS Yeddyurappa-took – class – vidhansoudha- officer