Tuesday, September 15, 2026

BDA Apartments

ಬೆಳಗಾವಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬಿಎಸ್ ಯಡ...
Home Front Page ಬೆಳಗಾವಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಳಗಾವಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಳಗಾವಿ,ಆ,8,2019(www.justkannada.in): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ  ವರುಣನ ಆರ್ಭಟ ಜೋರಾಗಿದ್ದು ಮುಂದುವರೆದಿದ್ದು, ಹಲವು ಜಿಲ್ಲೆಗಳು ಪ್ರವಾಹದಿಂದ ನಲುಗಿವೆ.

ಈ ನಡುಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರೈಲ್ವೆ ಸಚಿವ ಸುರೇಶ್ ಅಂಗಡಿ, ಶಾಸಕ ಜಗದೀಶ್ ಶೆಟ್ಟರ್, ಸಂಸದೆ ಶೋಭಾ ಕರಂದ್ಲಾಜೆ ಈ ವೇಳೆ ಸಾಥ್ ನೀಡಿದ್ದಾರೆ. ಪ್ರವಾಹ ವೀಕ್ಷಣೆಗೆ ತಂಡ ರಚಿಸಲಾಗಿದ್ದು, ವರದಿ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಬೆಳಗಾವಿಯಲ್ಲಿ ನೆರೆ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಹದಿಂದ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೆರೆಪೀಡಿತ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕಿಸಲಿದ್ದಾರೆ.

Key words: CM BS Yeddyurappa – visit- flood-affected- areas – Belgavi