ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್ ಯಡಿಯೂರಪ್ಪ….

ಬೆಂಗಳೂರು,ನ,27,2019(www.justkannada.in): ಅನಾರೋಗ್ಯದ ಹಿನ್ನೆಲೆ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಖಾಸಗೀ ಆಸ್ಪತ್ರೆಯಲ್ಲಿ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲರವರಿಗೆ, ಚಿಕ್ಕ ಸರ್ಜರಿಯಾಗಿದೆ ಆದ ಕಾರಣ ನಾನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ.  ಆ ಸಮಯದಲ್ಲಿ ವಜುಬಾಯಿ ವಾಲಾರವರು, ನಾನು ಆರಾಮಾಗಿದ್ದೇನೆ ಮೂರು ದಿನ ವಿಶ್ರಾಂತಿ ತೆಗೆದುಕೊಂಡು ನಂತರ ಕಛೇರಿಯಲ್ಲಿ ಸಿಗುತ್ತೇನೆ ಎಂದು ಹೇಳಿದರು. ಹಾಗೂ ಉಪಚುನಾವಣೆ ಹೇಗೆ ನಡೆಯುತ್ತಿದೆ? ಉಪಚುನಾವಣೆಯನ್ನು ಚೆನ್ನಾಗಿ ನಡೆಸಿ ಎಂದು  ಸೂಚಿಸಿದರು ಎಂದರು.

ಈ ಸಂದರ್ಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಜತೆ ಸಂಸದೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

Key words: CM BS Yeddyurappa- visit- hospital- Governor -Vajubhai Wala -health