Sunday, September 20, 2026

BDA Apartments

ಆ.25 ರಂದು ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಸಿಎಂ ಬಿಎಸ್ ವೈ ಭೇಟಿ… BDA JK_Adv BDA Adv
Home Front Page ಆ.25 ರಂದು ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಸಿಎಂ ಬಿಎಸ್ ವೈ ಭೇಟಿ…

ಆ.25 ರಂದು ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಸಿಎಂ ಬಿಎಸ್ ವೈ ಭೇಟಿ…

ಬೆಳಗಾವಿ,ಆ,22,2020(www.justkannada.in):  ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಬೆಳೆಹಾನಿ ಹಿನ್ನೆಲೆ ಆಗಸ್ಟ್ 22 ರಂದು ಸಿಎಂ ಬಿಎಸ್ ಯಡಿಯೂರಪ್ಪ  ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.jk-logo-justkannada-logo

ಮಂಗಳವಾರ ಎರಡು ಜಿಲ್ಲೆಗಳಿಗೆ ಭೇಟಿ ನೀಡಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಮಳೆ ಹಾನಿ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ, ಬೆಳಗಾವಿ, ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಜತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.cm-bs-yeddyurappa-visits-belgavi-vijayapur-district-aug-25th

ಹಾಗೆಯೇ ವಿಜಯಪುರ ಜಿಲ್ಲೆ ಅಲಮಟ್ಟಿ ಅತಿಥಿಗೃಹದಲ್ಲಿ, ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಜತೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಭಾರಿ ಮಳೆಯಾದ ಹಿನ್ನೆಲೆ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಅಪಾರಪ್ರಮಾಣದ ಬೆಳೆ ಹಾನಿಯುಂಟಾಗಿದೆ.

Key words: CM BS Yeddyurappa- visits –Belgavi—Vijayapur- district –aug 25th