Sunday, September 20, 2026

BDA Apartments

Home Front Page ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ…

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು, ಜ. 30,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಬಿಎಸ್ ಯಡಿಯೂರಪ್ಪ ನಾಳೆಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪಕ್ಷದ ವರಿಷ್ಠರ ಜತೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ತಮ್ಮ ಡಾಲರ್ಸ್ ಕಾಲನಿಯ ನಿವಾಸದಿಂದ ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ದೆಹಲಿಗೆ ತೆರಳಿದ್ದಾರೆ. ಸಿಎಂ ಬಿಎಸ್ ವೈಗೆ ಇಬ್ಬರು ಪುತ್ರರಾದ ಬಿವೈ ರಾಘವೇಂದ್ರ ಮತ್ತು ವಿಜಯೇಂದ್ರ ಸಾಥ್ ನೀಡಿದರು.

ರಾತ್ರಿ 10 ಗಂಟೆಗೆ ಅಮಿತ್ ಶಾ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅಲ್ಲದೇ ನಾಳೆಯೇ 99% ಸಂಪುಟ ವಿಸ್ತರಣೆ ಕ್ಲಿಯರ್ ಆಗಲಿದೆ ಎಂದು ಈಗಾಗಲೇ ಸಿಎಂ ಬಿಎಸ್ ವೈ ಹೇಳಿಕೆ ನೀಡಿದ್ದಾರೆ.

Key words: CM BS Yeddyurappa – Went -Delhi -discuss –cabinet- expansion.