ವಿಶ್ವಾಸಮತ ಗೆದ್ದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಜು,29,2019(www.justkannada.in): ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ,  ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದರು.

ಸಿಎಂ ಬಿಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯ ಪ್ರಸ್ತಾಪವನ್ನು ಮಂಡಿಸಿದರು. ಧ್ವನಿಮತದ ಮೂಲಕ ಬಿಎಸ್‌ವೈ ಅವರು ವಿಶ್ವಾಸಮತವನ್ನು ಗೆದ್ದರು. ಈ ಮೂಲಕ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಮುಂದಿನ 6 ತಿಂಗಳ ಕಾಲ ಸೇಫ್ ಆಗಿದೆ.

ಹಾಗೆಯೇ ಸಿಎಂ ಬಿಎಸ್ ಯಡಿಯೂರಪ್ಪ ಧನವಿನಿಯೋಗ ವಿಧೇಯಕ ಮಂಡನೆ ಮಾಡಿದರು. ಮುಂದಿನ ಮೂರು ತಿಂಗಳಿಗೆ ಲೇಖಾನುದಾನಕ್ಕೆ ಅಂಗೀಕಾರವಾಯಿತು.

Key words: CM BS Yeddyurappa- won – vote of confidence-legislative assembly

.