ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೀದರ್,ಜನವರಿ,6,2021(www.justkannada.in): ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಿಲನ್ಯಾಸ ನೆರವೇರಿಸಿದ್ದಾರೆ.jk-logo-justkannada-mysore

ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಬಸವತತ್ವದ ವಿಧಿವಿಧಾನದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದ್ದಾರೆ. ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ.cm-bs-yeddyurappa-worship-construction-anubhava-mantapa-basava-kalyana

ಬಸವೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪ ಎರಡು ವರ್ಷದಲ್ಲಿ ನಿರ್ಮಾಣವಾಗಲಿ, ಯಾವುದೇ ಸಮಸ್ಯೆ ಆಗದಂತೆ ಅನುಭವ ಮಂಟಪ ನಿರ್ಮಾಣ ಕಾರ್ಯ ನೆರವೇರಲಿದೆ  ಎಂದು ಸಂಕಲ್ಪ ಮಾಡಿದರು.

Key words: CM BS Yeddyurappa -worship – construction – anubhava mantapa- basava kalyana