ಟೋಕಿಯೋ ಒಲಿಂಪಿಕ್ಸ್’ನಲ್ಲಿ ಪದಕಕ್ಕೆ ಕೊರಳೊಡ್ಡುವವರಿಗೆ ಬಂಪರ್ ಗಿಫ್ಟ್ ಘೋಷಿಸಿದ ಬಿಎಸ್ವೈ

ಬೆಂಗಳೂರು, ಜುಲೈ 15, 2021 (www.justkannada.in): ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ರಾಜ್ಯ ಸರಕಾರದಿಂದ ಭರ್ಜರಿ ಗಿಫ್ಟ್ ಸಿಗಲಿದೆ.

ಹೌದು. ಚಿನ್ನ, ಬೆಳ್ಳಿ, ಕಂಚಿಗೆ ಕೊರಳೊಡ್ಡಿ ತವರಿಗೆ ಮರಳುವ ಕ್ರೀಡಾಪಟುಗಳಿಗೆ ಕೋಟಿ ಕೋಟಿ ಬಹುಮಾನ ಮೊತ್ತ ಸಿಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುವಿಗೆ 5 ಕೋಟಿ, ಬೆಳ್ಳಿ ಗೆದ್ದರೆ 3 ಕೋಟಿ ಮತ್ತು ಕಂಚಿನ ಪದಕ ಗೆದ್ದರೆ 2 ಕೋಟಿ ರೂ. ಬಹುಮಾನ ಮೊತ್ತವನ್ನು ಸಿಎಂ ಘೋಷಿಸಿದ್ದಾರೆ.

ಕೇಂದ್ರದಿಂದಲೂ ಪ್ರತ್ಯೇಕವಾಗಿ 75 ಲಕ್ಷ ರೂ. ಬಹುಮಾನ ಸಿಗಲಿದೆ. ಈಗಾಗಲೇ ಉತ್ತರ ಪ್ರದೇಶ, ಹರ್ಯಾಣ, ಒಡಿಶಾ, ಚಂಡೀಗಢ, ಗುಜರಾತ್, ದೆಹಲಿ, ರಾಜಸ್ಥಾನ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಸಿಕ್ಕಿಂ, ಗೋವಾ, ಮೇಘಾಲಯ, ಪ.ಬಂಗಾಲ, ಜಮ್ಮು-ಕಾಶ್ಮೀರ ರಾಜ್ಯಗಳು ಕೂಡ ಬಹುಮಾನ ಮೊತ್ತ ಘೋಷಣೆ ಮಾಡಿವೆ.