ಕುದುರೆ ವ್ಯಾಪಾರ ಮಾಡಿರುವ ಬಗ್ಗೆ ಸಿಎಂ ಬಿಎಸ್ ವೈ ಬಾಯಿಂದಲೇ ಬಂದಿದೆ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು,ಆ,1,2019(www.justkannada.in): ಕುದುರೆ ವ್ಯಾಪಾರ ಮಾಡಿರುವುದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಾಯಿಂದ ಬಂದಿದೆ. ಇಂದು ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ದಿನೇಶ್ ಗುಂಡೂರಾವ್, ಲಿಂಗಾಯತ ಸಮುದಾಯದ ಮುಖಂಡರು ನಿನ್ನೆ ಸಿಎಂ ಭೇಟಿ ಮಾಡಿದಾಗ. 15 ಶಾಸಕರಿಗೆ ವಿಷ ಕೊಡಬೇಕಾ ಅಂತ ಪ್ರಶ್ನೆ ಮಾಡಿದ್ದಾರೆ. ಅವರ ಮಾತಿನಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಕುದುರೆ ವ್ಯಾಪಾರ ಮಾಡಿರುವುದು ಅವರ ಬಾಯಿಂದ ಬಂದಿದೆ.ಇಂದು ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇಂದು ನಡೆದ ಸಭೆಯಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆದಿದೆ. ಅತೃಪ್ತರ ವಿರುದ್ಧ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ನಮ್ಮ ಪಕ್ಷಕ್ಕೆ ದ್ರೋಹ ಬಗೆದವರಿಗೆ ಸರಿಯದ ಕ್ರಮ ಆಗಬೇಕು. ಹೀಗಾಗಿ ಅತೃಪ್ತ ಅನರ್ಹ ಶಾಸಕರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು ಅವರ ಜತೆ ಹೋಗಬಾರದು. ಆ ಕ್ಷೇತ್ರದ ಬ್ಲಾಕ್ ಸಮಿತಿ ಅಧ್ಯಕ್ಷ ವಿಸರ್ಜನೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಉಪ ಚುನಾವಣೆ 17 ಕ್ಷೇತ್ರಗಳಲ್ಲಿ ನಿಶ್ಚಿತ. ಹೀಗಾಗಿ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಉಪಚುನಾವಣೆ ಸಂಬಂಧ ಹಿರಿಯ ನಾಯಕರಿಗೆ ಜವಾಬ್ದಾರಿ ಕೊಟ್ಟಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಹಿರಿಯ ನಾಯಕರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ ಪಕ್ಷಕ್ಕೆ ಬದ್ಧರಾಗಿರುವವರಿಗೆ ಟಿಕೆಟ್ ಕೊಡಿ ಅಂತ ಹೇಳಿದ್ದಾರೆ. ಅದಕ್ಕೆ ನಾವು ಬದ್ಧರಾಗಿ ಟಿಕೆಟ್ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: CM BSY – horse business – KPCC president- Dinesh Gundurao