ಮುಂದಿನ ಎರಡುವರೆ ವರ್ಷ ಬಿಎಸ್ ವೈ ಅವರೇ ಸಿಎಂ- ಸಚಿವ ಮುರುಗೇಶ್ ನಿರಾಣಿ.

ಬೆಳಗಾವಿ,ಜೂನ್,10,2021(www.justkannada.in):  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ.  ಬಿಎಸ್ ಯಡಿಯೂರಪ್ಪ ಅವರೇ ಮುಂದಿನ ಎರಡುವರೆ ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.jk

ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಚಿವ ಮುರುಗೇಶ್ ನಿರಾಣಿ,  ಸಿಎಂ ಬಿಎಸ್ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಇಲ್ಲ. ಅಲ್ಲದೆ ಇದನ್ನೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ಇದನ್ನೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ ಅಂತಾ.  ಹೈಕಮಾಂಡ್ ಮುಂದೆ ನಾಯಕತ್ವ ಬದಲಾವಣೆ ಚಿಂತನೆ ಇಲ್ಲ ಎಂದರು.

ಮುಂದಿನ ಚುನಾವಣೆಯೂ ಸಹ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

Key words: CM – BSY – two and a half –years- Minister -Murugesh Nirani