Thursday, October 15, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಚರ್ಚೆಗೂ ಆಸ್ಪದ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಚರ್ಚೆಗೂ ಆಸ್ಪದ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಆಗಸ್ಟ್,30,2024 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಅನ್ನೋದು ಅಪ್ರಸ್ತುತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. ಅಂತಹ ಯಾವುದೇ ಚರ್ಚೆಗೂ ಆಸ್ಪದ ಇಲ್ಲ ಎಂದರು.

ಹಾಗೆಯೇ  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಅವರನ್ನು ಭೇಟಿಯಾಗಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಕಚೇರಿಗೆ ಹೋಗುತ್ತಾ ಇರುತ್ತೇವೆ. ಪಕ್ಷ ಸಂಘಟನೆ, ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ ಅಷ್ಟೇ ಎಂದರು.

Key words:   state, CM, Change, irrelevant- Minister, Sathish Jarakiholi