ಸಿಎಂ ಬದಲಾವಣೆ ವಿಚಾರ: ಎಲ್ಲವನ್ನ ಕಾಲವೇ ನಿರ್ಣಯಿಸುತ್ತೆ ಎಂದ ಮಾಜಿ ಸಚಿವ ಸಿ.ಟಿ ರವಿ.

ಬೆಂಗಳೂರು,ಜುಲೈ,26,2021(www.justkannada.in):  ಸಿಎಂ ಬದಲಾವಣೆ ವಿಚಾರ ಸಂಬಂಧ ನಿನ್ನೆ ಮಾತನಾಡಿ ಸಿಎಂ ಬಿಎಸ್ ವೈಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ಪರೋಕ್ಷ ಟಾಂಗ್ ನೀಡಿದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದೀಗ ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.jk

ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಸಿ.ಟಿ ರವಿ, ದಿನಕ್ಕೊಂದು ಸುದ್ಧಿ ಬರುತ್ತೆ ಎಲ್ಲದಕ್ಕೂ ಉತ್ತರಿಸಲು ಆಗುತ್ತಾ..? ಎರಡು ವರ್ಷ ಸಿಎಂ ಬಿಎಸ್ ವೈ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸ್ಪಷ್ಟನೆ ನೀಡಿದ್ದಾರೆ. ನಾನು ಪಕ್ಷ ನೀಡಿದ ಜವಾಬ್ದಾರಿಯನ್ನ ನಿಭಾಯಿಸುತ್ತೇನೆ ಎಂದರು.

ಇಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ್ದು, ಈ ಮಧ್ಯೆ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಸಿಎಂ ಬಿಎಸ್ ವೈ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

Key words: CM- Change- Issue-Former Minister -CT Ravi