Friday, October 16, 2026

Dasara Wishes

Happy Dasara
Home Front Page ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ  ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ರೇಕ್ ಫಾಸ್ಟ್ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಂದು ಬೆಳಿಗ್ಗೆ ಸಂಪುಟ ಸಹದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿದ್ದ ಸಿಎಂ ಸಿದ್ದರಾಮಯ್ಯ  ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸಚಿವರಿಗೆ ತಿಳಿಸಿದ್ದು ಇದೇ ವೇಳೆ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಹೈಕಮಾಂಡ್  ಹೇಳಿರೋದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿರುವುದಾಗಿ ಹೇಳಿದ್ದಾರೆ.

Key words: DK Shivakumar,  next CM, CM Siddaramaiah, breakfast meeting