Saturday, September 26, 2026

BDA Apartments

Milk price hike BDA JK_Adv BDA Adv
Home Front Page ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು.

ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್ ಅವರು, ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ  ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.Milk price hike cm dks1

‘ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.decision jk02_new jk02 new

 

English Summary
Title

Karnataka Milk Price Hike: CM D.K. Shivakumar States State Cabinet to Finalise Nandini Milk Price Revision

Short Description
Karnataka Chief Minister D.K. Shivakumar announced that the state Cabinet will hold a formal discussion to evaluate the proposed Nandini milk price hike before finalising a decision. Facing immense pressure from dairy farmers and various district milk unions over rising fodder, transportation, and production costs, the government is considering a potential price revision of ₹5 to ₹10 per litre. Local cooperatives argue that low retail rates under the Karnataka Milk Federation (KMF) are causing financial distress, forcing them to look at neighbouring states where procurement rates are significantly higher. The impending price adjustment intends to balance critical support for dairy farmers while shielding retail consumers from severe price shocks.
Keywords
Milk price hike, decision, discussion, Cabinet, CM, D.K. Shivakumar