Thursday, September 10, 2026

BDA Apartments

Home Front Page ಪ್ರಧಾನಿ ಮೋದಿ ಈಗಲಾದ್ರೂ ಮಾತನಾಡಿರೋದು ಸ್ವಾಗತಾರ್ಹ- ಸಿಎಂ ಡಿಕೆ ಶಿವಕುಮಾರ್

ಪ್ರಧಾನಿ ಮೋದಿ ಈಗಲಾದ್ರೂ ಮಾತನಾಡಿರೋದು ಸ್ವಾಗತಾರ್ಹ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,24,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆದು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಆದ ಹಿನ್ನೆಲೆಯಲ್ಲಿ ದೇಶಾದ್ಯಂತ ಆಕ್ರೋಶ ಹೆಚ್ಚಾದ ಬೆನ್ನಲ್ಲೆ ಪ್ರಧಾನಿ ಮೋದಿ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದರು.

ಈ ಬಗ್ಗೆ ಇದೀಗ ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಈಗಲಾದ್ರೂ ಮಾತನಾಡಿರುವುದು ಸ್ವಾಗತಾರ್ಹ.  15 ದಿನದ ಬಳಿಕವಾದರೂ ಪ್ರಧಾನಿ ಮೋದಿ ಮಾತನಾಡಿದ್ದಾರೆ.  ದೇಶದ ಭವಿಷ್ಯದ ಬಗ್ಗೆ  ಎಲ್ಲರೂ ಒಂದಾಗಿ ಕೆಲಸ ಮಾಡಬೇಕು  ಎಂದಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ  ಸಿಜೆಪಿ ವಿದ್ಯಾರ್ಥಿಗಳ ಪ್ರತಿಭಟನೆ, ಸಂಸತ್ ನ ಹೊರಗೆ ಮತ್ತು ಒಳಗೆ ವಿಪಕ್ಷಗಳ ಧರಣಿ ಹೆಚ್ಚಾದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

Key words:  NEET, Paper Leak, PM Modi, spoken, CM DK Shivakumar