Saturday, September 5, 2026

BDA Apartments

Home Front Page ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್

ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,6,2026 (www.justkannada.in): ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕಾರ ಮಾಡಲ್ಲ ಎಂದು ಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಚಿವ ರಾಂಲಿಂಗರೆಡ್ಡಿ ಜೊತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದರು.

ರಾಜ್ಯ ಸರ್ಕಾರದ ವಿರುದ್ದ ಪ್ರಧಾನಿ ಮೋದಿ  ಟೀಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ  ಮೋದಿ ನನಗೆ ಶುಭ ಹಾರೈಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತು ಅವರು ರಾಜಕೀಯ ಮಾಡುವುದು ಬೇಡ. ನಮ್ಮ ಸರ್ಕಾರ ಇರೋದು ಜನರ ಅಭಿವೃದ್ದಿಗೆ ರಾಜ್ಯದ ವಿಚಾರಕ್ಕೆ ಮೋದಿ ಅವರನ್ನ ಭೇಟಿ ಮಾಡುತ್ತೇನೆ ಎಂದರು.

Key words: not accept, Ramalinga Reddy, resignation, CM DK Shivakumar