ವಿಜಯನಗರ,ಸೆಪ್ಟಂಬರ್,5,2026 (www.justkannada.in): ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್ ಸಿಹಿಸುದ್ದಿ ನೀಡಿದ್ದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಆಂತರಿಕ ಮೀಸಲಾತಿ ನೀಡಲು ನೀರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಗಿಯಲ್ಲಿ ಇಂದು ಪ್ರಜಾಸೇವೆ ಇಲಾಖೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಬಡ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಶಕ್ತಿ ತುಂಬಲು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7ರಷ್ಟು ಆಂತರಿಕ ಮೀಸಲಾತಿ ನೀಡಲು ಕ್ಯಾಬಿನೆಟ್ನಲ್ಲಿ ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಇದರ ಜಾರಿಯ ರೂಪುರೇಷೆ ಪ್ರಕಟಿಸುವುದಾಗಿ ತಿಳಿಸಿದರು.
‘ಅಕ್ಷರ ಸೇವೆಯೇ ಪರಮಾತ್ಮನ ಸೇವೆ. ಸಮಾಜವನ್ನು ತಿದ್ದಿ ತೀಡುವ ಶಿಕ್ಷಕರಿಗೆ ಅರ್ಹ ಗೌರವ ಸಿಗಬೇಕು. ವೈದ್ಯರ ಹೆಸರಿನ ಮುಂದೆ ‘Dr’ ಎಂದು ಬಳಸುವಂತೆ, ಇನ್ಮುಂದೆ ಪ್ರತಿಯೊಬ್ಬ ಶಿಕ್ಷಕರ ಹೆಸರಿನ ಮುಂದೆಯೂ ಗೌರವಾರ್ಥವಾಗಿ ‘Tr’ ಎಂದು ಸಂಬೋಧಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.
ಹಾಗೆಯೇ ಸದ್ಯದಲ್ಲೇ 50 ತಾಲ್ಲೂಕುಗಳ 2ನೇ ಬರಪಟ್ಟಿಯನ್ನು ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
Key words: 7.5% reservation, government schools, children, CM DK Shivakumar







