Thursday, September 24, 2026

BDA Apartments

ಡಿ.12ರಿಂದ ಮೂರು ದಿನಗಳ ಕಾಲ ‘ಮೈಸೂರು ಇಂಗ್ಲಿಷ್ ಥೇಟರ್ ಫೆಸ್ಟಿವಲ್’ BDA JK_Adv BDA Adv
Home Front Page BSY, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ಎಚ್ಚರಿಕೆ ದಾಖಲೆ ಬಿಡುಗಡೆ ಮಾಡಲೇ? ಸಿಎಂ ಡಿಕೆಶಿ...

BSY, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ಎಚ್ಚರಿಕೆ ದಾಖಲೆ ಬಿಡುಗಡೆ ಮಾಡಲೇ? ಸಿಎಂ ಡಿಕೆಶಿ ಟಾಂಗ್

ಬೆಂಗಳೂರು, ಸೆಪ್ಟಂಬರ್‌,24,2026 (www.justkannada.in):  ಬಿಜೆಪಿ ನಾಯಕರು ಚೊಂಬು  ಹಿಡಿದು ಪ್ರತಿಭಟನೆ ಮಾಡಿದ ವಿಚಾರಕ್ಕೆ ತಿರುಗೇಟು ನೀಡಿರುವ ಸಿಎಂ ಡಿಕೆ ಶಿವಕುಮಾರ್‌, ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಆರ್ಥಿಕ ಇಲಾಖೆ ಎಚ್ಚರಿಕೆ ನೀಡುತ್ತದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಎಚ್ಚರಿಕೆ ನೀಡಿದ್ದು, ಬೇಕಾದರೆ ದಾಖಲೆ ಬಿಡುಗಡೆ ಮಾಡಲೇ..? ಎಂದು ಟಾಂಗ್‌ ಕೊಟ್ಟರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ  ಶಿವಕುಮಾರ್, ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ” ಎಂದು ತಿಳಿಸಿದರು.

ಬರ ಪರಿಹಾರ ವಿಚಾರವಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ಕೇಳಿದಾಗ, “ಸರ್ವಪಕ್ಷ ನಿಯೋಗ ದೆಹಲಿಗೆ ಹೋಗಲಿದೆ, ಪ್ರಧಾನಮಂತ್ರಿಗಳ ಭೇಟಿಗೆ ಸಮಯಾವಕಾಶ ಕೇಳಿದ್ದು, ಉಪಮುಖ್ಯಮಂತ್ರಿಗಳು ಬರ ಪರಿಸ್ಥಿತಿಯ ಆಳವಾದ ಅಧ್ಯಯನ ಮಾಡಿದ್ದಾರೆ. ಈಗ ಮಧ್ಯಂತರ ಪರಿಹಾರ ನೀಡಿ, ನಂತರ ಬರ ಅಧ್ಯಯನ ಮಾಡಿ ಹೆಚ್ಚು ಪರಿಹಾರ ನೀಡಬೇಕು. ವಿರೋಧ ಪಕ್ಷಗಳ ನಾಯಕರು ಹಾಗೂ ಸಂಸದರು ನಮಗೆ ನೆರವು ನೀಡುವ ವಿಶ್ವಾಸವಿದೆ. ಕರ್ನಾಟಕಕ್ಕೆ ನೆರವು ನೀಡಬೇಕಾಗಿರುವುದು ಪ್ರಧಾನಮಂತ್ರಿಗಳ ಕರ್ತವ್ಯ. ಬೇರೆ ರಾಜ್ಯಗಳು ಪ್ರತಿ ಯೂನಿಟ್ ಗೆ 20-22 ರೂ.ವರೆಗೆ ನೀಡಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು. ಸಾಧ್ಯವಿರುವ ಕಡೆ ಥರ್ಮಲ್ ಕೇಂದ್ರ ಸ್ಥಾಪನೆಗೆ ಸಾಧ್ಯತೆ ಹುಡುಕಲಾಗುತ್ತಿದೆ” ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ಎಚ್ಚರದ ದಾಖಲೆ ಬಿಡುಗಡೆ ಮಾಡಲೇ?

ಬಿಜೆಪಿಯ ಚೊಂಬು ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಆರ್ಥಿಕ ಇಲಾಖೆ ಸರ್ಕಾರಕ್ಕೆ ಸಲಹೆ ನೀಡಿದೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಆರ್ಥಿಕ ಇಲಾಖೆ ಎಚ್ಚರಿಕೆ ನೀಡುತ್ತದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಎಚ್ಚರಿಕೆ ನೀಡಿದ್ದು, ಬೇಕಾದರೆ ದಾಖಲೆ ಬಿಡುಗಡೆ ಮಾಡುತ್ತೇನೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯ ಮಾಡುವಂತಹ ದೊಡ್ಡ ವಿಚಾರವಲ್ಲ. ಅವರಿಗೆ ನನ್ನ ರಾಜೀನಾಮೆ ಬೇಕಾದರೆ ತೆಗೆದುಕೊಳ್ಳಲಿ” ಎಂದರು.Finance Department dks

ಸತ್ತ ಆರ್ಥಿಕತೆ ಎಂದು ಬಿಜೆಪಿಯವರು ಶವಯಾತ್ರೆಗೆ ಮುಂದಾಗಿದ್ದಾರೆ ಎಂದು ಕೇಳಿದಾಗ, “ಅವರು ಮಾಡಲಿ, ಅವರ ಸರ್ಕಾರದಲ್ಲಿ ನೀರಾವರಿ ಇಲಾಖೆಯಲ್ಲಿ ಇದ್ದ ಹಣವೆಷ್ಟು, ಅವರು ನೀಡಿದ ಕಾಮಗಾರಿಗಳೆಷ್ಟು? ಎಂದು ಪಟ್ಟಿ ನೀಡಲೇ? ಟೀಕೆ ಮಾಡುವುದು ಬಹಳ ಸುಲಭ, ಅಧಿಕಾರದಲ್ಲಿದ್ದಾಗ ನಿಭಾಯಿಸುವುದು ಸವಾಲಿನ ವಿಚಾರ. ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ನಮಗೆ ಜನರ ಬದುಕಿನ ಬಗ್ಗೆ ಕಾಳಜಿ ಇದೆ. ನಾವು ಜಾತಿ, ಧರ್ಮದ ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ” ಎಂದು ತಿಳಿಸಿದರು.‌Finance Department jk02

 

English Summary
Title

PM Modi's Duty to Help Karnataka: Deputy CM DK Shivakumar Demands Drought Relief Funds

Short Description
Karnataka Deputy CM D.K. Shivakumar emphasized that it is Prime Minister Narendra Modi's bounden duty to provide urgent financial assistance to Karnataka as the state battles a severe drought crisis. Out of 236 taluks, around 223 are declared drought-affected, triggering widespread crop loss and water scarcity. Shivakumar urged the Central Government to expedite the release of national disaster funds, highlighting that Karnataka contributes significantly to central taxes and deserves timely relief. He stressed that federal cooperation is vital to support struggling farmers, demanding immediate intervention from the PM to resolve the state's financial distress.
Keywords
Finance Department, warning, BSY, Bommai, governments, CM DK Shivakumar