ಬೆಂಗಳೂರು ,ಸೆಪ್ಟಂಬರ್,26,2026 (www.justkannada.in): ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಮುಖ್ಯ ಆಯುಕ್ತರನ್ನು ಬಂಧಿಸಬೇಕು ಹಾಗೂ ಅಕ್ರಮವಾಗಿ ನಡೆದ ಚುನಾವಣೆಗಳನ್ನು ರದ್ದು ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್, “ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಬಡ ಹಾಗೂ ಆಡಳಿತ ವ್ಯವಸ್ಥೆ ಟೀಕಿಸುವ ಮತದಾರರ ಹೆಸರನ್ನು ಗುರಿಯಾಗಿಸಲಾಗಿದೆ. ಬಿಜೆಪಿ ಜೊತೆ ಸೇರಿ ಮತಗಳ್ಳತನಕ್ಕೆ ಪಾಲುದಾರರಾಗಿದ್ದಾರೆ ಎಂದು ಟೀಕಿಸಿದರು.
ಜ್ಞಾನೇಶ್ ಕುಮಾರ್ ಅವರು ಚೀಫ್ ಎಲೆಕ್ಷನ್ ಕಮಿಷನರಾ..? ಅಥವಾ ಬಜೆಪಿಯ ಚೀಫ್ ಸೆಲೆಕ್ಷನ್ ಕಮಿಷನರಾ? ಎಂದು ಗುಡುಗಿದ ಸಿಎಂ ಡಿಕೆ ಶಿವಕುಮಾರ್, ಜನ ನಿಮ್ಮ ಅನ್ಯಾಯಗಳ ವಿರುದ್ಧ ದಂಗೆ ಏಳುತ್ತಾರೆ. ಕೇಂದ್ರ ಸರ್ಕಾರ ಅಧಿವೇಶನ ಕರೆದು ಇದರ ಬಗ್ಗೆ ಶೀಘ್ರ ಚರ್ಚೆ ನಡೆಸಬೇಕು. ಈಗ ನಡೆದಿರುವ ಎಸ್ ಐಆರ್ ರದ್ದುಗೊಳಿಸಿ, ಹೊಸದಾಗಿ ಮರುಪರಿಶೀಲನೆ ನಡೆಯಬೇಕು” ಎಂದು ಆಗ್ರಹಿಸಿದರು.
Key words: CM, DK Shivakumar, President, intervene, Election Commission, arrest, Chief Commissioner.







