ಬೆಂಗಳೂರು,ಆಗಸ್ಟ್,19,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ನಿಧನರಾದ ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಸಿ ನಾಗೇಶ್ ಅವರ ಅಂತಿಮ ದರ್ಶನ ಪಡೆದರು.
ನಿನ್ನೆ ರಾತ್ರಿ ಮಾಜಿ ಸಚಿವ ಬಿ.ಸಿ ನಾಗೇಶ್ ಅನಾರೋಗ್ಯದಿಂದ ಮೃತರಾಗಿದ್ದು ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿದೆ. ಇಂದು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್ ಅವರು ಬಿ.ಸಿ ನಾಗೇಶ್ ಅವರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಬಿ.ಸಿ ನಾಗೇಶ್ ಬಹಳ ವರ್ಷಗಳಿಂದ ನನಗೆ ಪರಿಚಯ ಮಂತ್ರಿಯಾಗಿ ನಾಗೇಶ್ ಕೆಲಸ ಮಾಡಿದ್ದಾರೆ. ಅವರು ಪ್ರಾಮಾಣಿಕ ವ್ಯಕ್ತಿ ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ತರಲು ಶ್ರಮಿಸಿದ್ದರು. ನಾಗೇಶ್ ಅವರಿಗೆ ಕ್ಯಾನ್ಸರ್ ಬಂದಿದೆ ಎಂದು ತಿಳಿದಾಗ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.
Key words: CM DK Shivakumar, last respects, former minister, BC Nagesh







