Tuesday, September 15, 2026

BDA Apartments

ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಮೈಸೂರು ಜಿಲ್ಲಾ ಪ್ರವಾಸ BDA JK_Adv BDA Adv
Home Front Page ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಮೈಸೂರು ಜಿಲ್ಲಾ ಪ್ರವಾಸ

ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,31,2026 (www.justkannada.in):  ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದು ಅವರನ್ನ ಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಡಿಕೆ ಶಿವಕುಮಾರ್ 10.45ಕ್ಕೆ ಮೈಸೂರಿಗೆ ಆಗಮಿಸಿ  11.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.  12.30ಕ್ಕೆ ತಾಯಿ ಚಾಮುಂಡೇಶ್ವರಿ ದೇವರ ದರ್ಶನ ಪಡೆದು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಮೈಸೂರು ಜಿಲ್ಲಾ ಪ್ರವಾಸ pm modi-dks pm modi dks

ನಂತರ 3.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಓವಲ್ ಗ್ರೌಂಡ್ ಹೆಲಿಪ್ಯಾಡ್ ಬಳಿ ಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಲಿದ್ದಾರೆ. ಇದಾದ ನಂತರ ರಾಮಕೃಷ್ಣ ಆಶ್ರಮದಲ್ಲಿ  ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ , ವಿವೇಕ ಸ್ಮಾರಕದ ಉದ್ಗಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.mysore jk02_new jk02 new

ಇದಾದ ಬಳಿಕ 5.15ಕ್ಕೆ ಪ್ರಧಾನಿ ಮೋದಿ ಅವರಿಗೆ ಬೀಳ್ಕೊಟ್ಟು ಬೆಂಗಳೂರಿಗೆ ತೆರಳಲಿದ್ದಾರೆ.

Key words: CM DK Shivakumar, tour, Mysore district, tomorrow