ಬ್ರೇಕ್ ಜಾಮ್ ಆಗಿ ಸಿಎಂ ಬೆಂಗಾವಲು ವಾಹನ ಪಲ್ಟಿ….

ಚಿಕ್ಕಮಗಳೂರು, ನವೆಂಬರ್ 6,2020(www.justkannada.in):  ಬ್ರೇಕ್ ಜಾಮ್ ಆಗಿ ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.jk-logo-justkannada-logo

ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಬಳಿ ಈ ಘಟನೆ ನಡೆದಿದೆ. ಮಂಗಳೂರಿನಿಂದ ವಾಪಸ್ ಬರುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.  ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಗೆಂದು ಮಂಗಳೂರಿಗೆ ಆಗಮಿಸಿದ್ದರು. ಈ ಸಮಯದಲ್ಲಿ ಸಿಎಂ ಬೆಂಗಾವಲು ಕರ್ತವ್ಯದಲ್ಲಿದ್ದವರು ಇಂದು ಇಂದು ವಾಪಸ್ ಬರುವ ವೇಳೆ ಈ ಅವಘಡ ಸಂಭವಿಸಿದೆ.cm-escort-vehicle-plunge-brake-jam-chikkamagalore

ವಾಹನ ಚಲಿಸುವಾಗ ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಜೀಪ್ ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ. ಜೀಪ್ ಚಾಲಕ ಶರತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM -escort vehicle- plunge – brake jam-chikkamagalore