ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ …?

ಬೆಂಗಳೂರು,ಮೇ,3,2019(www.justkannada.in):   ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ,ಟಿ ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.

ಮಂಡ್ಯ ಕಾಂಗ್ರೆಸ್ ನ ಮುಖಡರಾದ ಚಲುವರಾಯಸ್ವಾಮಿ  ನರೇಂದ್ರ ಅವರು ಸೇರಿ ಕೆಲವು ಮುಖಂಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತ ವಿಡಿಯೂ ವೈರಲ್ ಆಗಿತ್ತು. ಈ ಡಿನ್ನರ್ ಪಾರ್ಟಿ ಆದ  ಮಾರನೇ ದಿನ ಸಚಿವ ಜಿ.ಟಿ ದೇವೇಗೌಡರು,  ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ  ಎಂದು ಹೇಳಿಕೆ ನೀಡಿದ್ದರು.

ಹೀಗಾಗಿ ಡಿನ್ನರ್ ಪಾರ್ಟಿ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಿದ್ದು, ಇದನ್ನ ಖಚಿತಪಡಿಸಿಕೊಂಡ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಸುಮಲತಾ ಅವರ ಔತಣಕೂಟದ ನಂತರ ಬೆಳಿಗ್ಗೆ ಸಚಿವ ಜಿ.ಟಿ ದೇವೇಗೌಡರಿಂದ ಈ ಹೇಳಿಕೆ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಔತಣ ಕೂಟದ ವಿಡಿಯೋವನ್ನು ಜೆಡಿಎಸ್ ನವರೇ ಹರಿಬಿಟ್ಟಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಔಈ ಬಗ್ಗೆ ಖಚಿತಪಡಿಸಿಕೊಂಡಿರುವ ಕಾಂಗ್ರೆಸ್ ನಾಯಕರು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪ್ಲಾನ್ ಬಗ್ಗೆ ಅನುಮಾನದ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

Key words: CM H.D Kumaraswamy- Minister -GT Deve Gowda-JDS- workers- voting -BJP.