ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಜೂ,7,2019(www.justkannada.in): ಯಾವಾಗ ಬೇಕಾದರೂ ಚುನಾವಣೆ ಎದುರಾಗಬಹುದು. ಹೀಗಾಗಿ ಈಗಲೇ ಸಿದ್ದರಾಗಿ ಎಂದು ಜೆಡಿಎಸ್ ಕಾರ್ಯಕರ್ತರನ್ನ ಉದ್ದೇಶಿಸಿ ನಿಖಿಲ್ ಕುಮಾರಸ್ವಾಮಿ  ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆಗಿ ವರದಿಯಾಗಿತ್ತು.

ಇದೀಗ ಈ ಕುರಿತು ಸ್ಪಷ್ಟನೆ  ನೀಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ ಮಾತ್ರ ಹೋರಾಟ ಎಂದಾಗದೇ ಯಾವಾಗ ಚುನಾವಣೆ ಎದುರಾದರೂ ಜಯ ಗಳಿಸುವ ಸ್ಥಿತಿಯಲ್ಲಿ ಪಕ್ಷವನ್ನು ಚುರುಕಾಗಿಟ್ಟಿರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುತ್ತಾ ಹುರಿದುಂಬಿಸಿದ್ದಾರೆ.

ಆದರೆ ಇದನ್ನು ಸಂದರ್ಭರಹಿತವಾಗಿ ಉಲ್ಲೇಖಿಸಿ ಮಾಧ್ಯಮಗಳಲ್ಲಿ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು ಎನ್ನುವಂತೆ ಬಿಂಬಿಸಲಾಗಿದೆ. ಇದು ವಾಸ್ತವಕ್ಕೆ ದೂರವಾದ ಸಂಗತಿ. ಮೈತ್ರಿ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತದೆ. ಮಧ್ಯಂತರ ಚುನಾವಣೆಯ ವಿಷಯವೇ ಈಗ ಅಪ್ರಸ್ತುತ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: CM HD Kumaraswamy clarified about son Nikhil Kumaraswamy’s statement.

#CMHDKumaraswamy #clarified #NikhilKumaraswamy  #statement.