ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಜತೆ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ: ಅತೃಪ್ತ ಶಾಸಕರ ವಿರುದ್ದ ದೂರು ನೀಡಲು ನಿರ್ಧಾರ…?

ಬೆಂಗಳೂರು,ಜು,9,2019(www.justkannada.in): ಅತೃಪ್ತ ಶಾಸಕರು ರಾಜೀನಾಮೆ ಹಿನ್ನೆಲೆ,  ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಸ್ಪೀಕರ್ ನಿರ್ಧಾರ ಕುರಿತು ಚರ್ಚೆ ನಡೆಸಿದ್ದಾರೆ.

ನಗರದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ಸ್ಪೀಕರ್ ನಿರ್ಧಾರದ ಬಳಿಕ ಅತೃಪ್ತ ಶಾಸಕರ ಉಚ್ಛಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಾದ ಹೆಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಮೂವರ ವಿರುದ್ದ ಸ್ಪೀಕರ್ ಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಅಲ್ಲದೆ ಮೂವರು ಶಾಸಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

Key words: CM HD Kumaraswamy- discussed – HD Deve Gowda- complaint- against- dissatisfied MLA