Wednesday, August 12, 2026

BDA Apartments

Home Front Page ಕೈಕಾಲು ಕಳೆದುಕೊಂಡ ಇಂಜಿನಿಯರಿಂಗ್ ಪದವೀಧರನಿಗೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಕೈಕಾಲು ಕಳೆದುಕೊಂಡ ಇಂಜಿನಿಯರಿಂಗ್ ಪದವೀಧರನಿಗೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಯಾದಗಿರಿ, ಜೂನ್, 22,2019(www.justkannada.in): ಅಪಘಾತವೊಂದರಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡ್ರಕಿಯಲ್ಲಿ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.

ನಿನ್ನೆ ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು.

ಇನ್ನು ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೂಡಲೇ ಸ್ಪಂದಿಸಿ ಬೆಳಿಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ  ಇಂದು ಜೂನ್ 22 ರಂದು  ಬೆಳಿಗ್ಗೆ ಚೆಕ್ ಹಸ್ತಾಂತರಿಸಿದರು. ಈ ವೇಳೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಮತ್ತಿತರರು ಇದ್ದರು.

key words: CM HD Kumaraswamy -distributes – check – -engineering graduate-yadagiri