ಹಾಸನ ಜಿಲ್ಲೆಯ ಜೆಸಿ ಪುರದಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

ಹಾಸನ, ಜೂನ್16, 2019 (www.justkannada.in): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜೂ.18ರಂದು ಅರಸೀಕೆರೆ ತಾಲೂಕಿನ ಜೆ.ಸಿ.ಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಹಾಸನ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ಕುರಿತು ಪೂರ್ವ ಭಾವಿ ಸಭೆ ನಡೆಸಿದ್ದಾರೆ. ಜೂ.18 ರಂದು ಹಾನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿಯ ಜೆ.ಸಿ.ಪುರದಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಜೂ.18ರಂದು ಅರಸೀಕೆರೆ ತಾಲೂಕಿನ ಗಂಡಸಿಗೆ ಸಂಜೆ 5 ಗಂಟೆಗೆ ಆಗಮಿಸುವ ಕುಮಾರಸ್ವಾಮಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವರು. ಅಂದು ಕಣಕಟ್ಟೆ ಹೋಬಳಿಯ ಜೆ.ಸಿ.ಪುರದಲ್ಲಿ ಸಂಜೆ 6 ಗಂಟೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವುದರ ಜೊತೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.