Thursday, August 6, 2026

BDA Apartments

Home Front Page ಇಂದು ಉಜಳಂಬದಲ್ಲಿ ಗ್ರಾಮವಾಸ್ತವ್ಯ:  ಕಲ್ಬುರ್ಗಿ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಸಿಎಂ ಹೆಚ್.ಡಿ...

ಇಂದು ಉಜಳಂಬದಲ್ಲಿ ಗ್ರಾಮವಾಸ್ತವ್ಯ:  ಕಲ್ಬುರ್ಗಿ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಕಲ್ಬುರ್ಗಿ,ಜೂ,27,2019(www.justkannada.in): ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ, ಕಲಬುರ್ಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕಲಬುರ್ಗಿ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಐ.ಜಿ.ಪಿ. ಮನೀಶ್ ಕರ್ಬಿಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಜಾ ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಮತ್ತಿತರರು ಪಾಲ್ಗೊಂಡಿದ್ದರು.

ಇನ್ನು ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಉಜಳಾಂಬ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ. ನಿನ್ನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕರೇಗುಡ್ಡದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

Key words: CM HD Kumaraswamy-  meeting-officer- Kalbargi district.