Sunday, August 23, 2026

BDA Apartments

Home Front Page ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ತೆರಳಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ..

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ತೆರಳಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ..

ಬೆಂಗಳೂರು,ಮೇ,29,2019(www.justkannada.in): ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ನವದೆಹಲಿ ತೆರಳಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಸರಳ ಬಹುಮತ ಪಡೆದಿದ್ದು, ನಾಳೆ ದೇಶದ ಪ್ರಧಾನಿಯಾಗಿ  ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಾಳೆ ಸಂಜೆ 7 ಗಂಟೆ ವೇಳೆಗೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದ್ದು  ದೇಶದ ನೂತನ ಪ್ರಧಾನಿಗೆ ರಾಷ್ಟ್ರಪತಿ ರಾಮನಾಥ್‍ ಕೋವಿಂದ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶ ವಿದೇಶಗಳಿಂದ ಆನೇಕ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ. ಈ ನಡುವೆ ರಾಜ್ಯದ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.  ಈ ಹಿನ್ನೆಲೆ ನಾಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM HD Kumaraswamy  will attend Prime Minister Narendra Modi’s Oath ceremony..

#CMHDKumaraswamy #PrimeMinisterNarendraModi #Oathceremony..