ಸ್ಪೀಕರ್ ರಮೇಶ್ ಕುಮಾರ್ ರನ್ನ  ಭೇಟಿ ಮಾಡಿ ಚರ್ಚಿಸಿದ ದೋಸ್ತಿ ಪಕ್ಷದ ನಾಯಕರು…

ಬೆಂಗಳೂರು, ಜುಲೈ 17,2019(www.justkannada.in):  ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದ  ಹಿನ್ನೆಲೆ ಇಂದು  ಸಿಎಂ ಎಚ್ ಡಿ ಕುಮಾರಸ್ವಾಮಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸಮ್ಮಿಶ್ರ ಸರ್ಕಾರದ ನಾಯಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ  ಚರ್ಚೆ ನಡೆಸಿದರು.

ಸ್ಪೀಕರ್ ಭೇಟಿಗೂ ಮೊದಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಜಾರ್ಜ್ ಸೇರಿ ಹಲವು ನಾಯಕರು ದೊಮ್ಮಲೂರಿನ ಎಂಬಸ್ಸಿ ಬುಸಿನೆಸ್ ಪಾರ್ಕ್ ಒಳಗಿರುವ ಹಿಲ್ಟನ್ ಹೋಟೆಲ್ ನಲ್ಲಿ ಸಭೆ ನಡೆಸಿದ್ದರು. ಇದಾದ ಬಳಿಕ ದೋಸ್ತಿ ಸರ್ಕಾರದ ನಾಯಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಾಯಕರಾದ ಕೆಜೆ ಜಾರ್ಜ್, ಕೃಷ್ಣಬೈರೇಗೌಡ ಸೇರಿದಂತೆ ಮೈತ್ರಿ ಸರ್ಕಾರದ ನಾಯಕರು ಬು ಸ್ಪೀಕರ್ ಕಚೇರಿಗೆ ತೆರಳಿ ಸಮಾಲೋಚನೆ ನಡೆಸಿದರು. ಸುಪ್ರೀಂಕೋರ್ಟ್ ತೀರ್ಪು ಅತೃಪ್ತ ಶಾಸಕರ ಅನರ್ಹತೆ, ಮುಂದಿನ ನಡೆ ಏನೆಂಬುದರ ಬಗ್ಗೆ ದೋಸ್ತಿ ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ನಾಳಿನ ವಿಶ್ವಾಸಮತ ಯಾಚನೆಯನ್ನು ಮುಂದೂಡುವ ಸಾಧ್ಯತೆ ಇದೆಯೇ.  ಹಾಗೆ ಮುಂದೂಡುವ ಮೂಲಕ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗಿದೆ. ಗುರುವಾರ ವಿಶ್ವಾಸಮತ ಯಾಚನೆಗೆ ಕುಮಾರಸ್ವಾಮಿ ಅವರು ಸಿದ್ಧರಾಗಿರುವುದರಿಂದ, ಅಂದು ಯಾವ ಕ್ರಮಗಳನ್ನು ಅನುಸರಿಸಬೇಕು, ಮುಂದಿನ ನಡೆಗಳೇನು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Key words: cm HDkumaraswamy-congress- leaders meet-speaker -Ramesh Kumar