ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ ಮಾಡಿದ ಸಚಿವ ಎಂ. ಪಾಟೀಲ್ ಹಾಗೂ ಈಶ್ವರ್ ಖಂಡ್ರೆ…

ಬೆಂಗಳೂರು,ಜೂ,20,2019(www.justkannada.in): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ಇಂದು ಗೃಹ ಸಚಿವ ಎಂ.ಪಾಟೀಲ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾತನಾಡಿದ ಈಶ್ವರ್ ಖಂಡ್ರೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಳಿ ಮನವಿ ಮಾಡಿದ್ದೇವೆ. ಜೊತೆಗೆ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸು ಮಾಡೋಕೆ ಮನವಿ ಮಾಡಿದ್ದೇವೆ. ಇದಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ವೀರಶೈವ ಲಿಂಗಾಯತರು ಕೃಷಿ ಮಾಡುತ್ತಿದ್ದಾರೆ. ಇಂದು ಕೃಷಿ ಕೂಡಾ ಕೈ ಕೊಟ್ಟಿದೆ. ನಮ್ಮಲ್ಲು ಬಡವರು ಇದ್ದಾರೆ, ಬೆಳೆ ಇಲ್ಲದೆ ಗುಳೆ ಹೋಗುತ್ತಿದ್ದಾರೆ. ಹೀಗಾಗಿ ನಮ್ಮ ಸಮುದಾಯಕ್ಕೆ ನಿಗಮ ಸ್ಥಾಪನೆ ಮಾಡಬೇಕು. ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕು ಅಂತ ಮನವಿ ಮಾಡಿದ್ದೇವೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ಎಂ.ಬಿ‌ ಪಾಟೀಲ್ , ಲಿಂಗಾಯತ ಸಮಾಜ ಮೂಲತಃ ಕೃಷಿಕರು. ರಾಜ್ಯದಲ್ಲಿ ೧೮ ವರ್ಷದಲ್ಲಿ ೧೨ ವರ್ಷ ಬರಗಾಲ ಇದೆ. ನಮ್ಮ ಸಮಾಜದಲ್ಲಿ ಹಲವರು ಬಡವರು ಇದ್ದಾರೆ. ಬಡತನದಲ್ಲಿ ಇರುವ ವೀರಶೈವ ಲಿಂಗಾಯತರಿಗೆ ಮಾತ್ರ ನಿಗಮ ಆಗಬೇಕು ಎಂದು ಮನವಿ ಕೊಟ್ಟಿದ್ದೇವೆ. ನಿಗಮ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ. ಲಿಂಗಾಯತರನ್ನ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಿದ್ರೇ ಕೇಂದ್ರದ ಉದ್ಯೋಗಗಳು ಸೇರಿದಂತೆ ವಿವಿಧೆಡೆ ಅನುಕೂಲ ಆಗುತ್ತದೆ. ಮೆರಿಟ್ ಆಧಾರದ ಮೇಲೆ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸೋಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಮನವಿ ಮಾಡಿದ್ದೇವೆ. ಚೆನ್ನಪ್ಪ ರೆಡ್ಡಿ ಆಯೋಗದಲ್ಲಿ ಕೂಡ ಇದರ ಶಿಫಾರಸು ಮಾಡಿದ್ದಾರೆ ಎಂದು ತಿಳಿಸಿದರು.

Key words: CM HM Kumaraswamy -met –Minister- MB Patil -Ishwar Khandre