Sunday, August 9, 2026

BDA Apartments

Home Front Page ಸಿಎಂ ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಸಿಎಂ ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಜನವರಿ,28,2022(www.justkannada.in):  ಈಗಾಗಲೇ ಕಾಂಗ್ರೆಸ್ ತೊರೆಯವ ಬಗ್ಗೆ ಸುಳಿವು ನೀಡಿರುವ ಸಿಎಂ ಇಬ್ರಾಹಿಂ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಇಬ್ರಾಹಿಂ ಅವರನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಇಬ್ರಾಹಿಂ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಇಬ್ರಾಹಿಂ  ನೋವಿನಿಂದ ಕೆಲ ಘಟನೆಗಳನ್ನ ಸ್ಮರಿಸಿದ್ರು.

ಹೆಚ್ ಡಿದೇವೇಗೌಡರು ಮತ್ತು ಸಿಎಂ ಇಬ್ರಾಹಿಂ ನಡುವೆ ಉತ್ತಮ ಬಾಂಧವ್ಯ ಇದೆ. ಇನ್ನು ಸಿಎಂ ಇಬ್ರಾಹಿಂ ತೀರ್ಮಾನ ತೆಗೆದುಕೊಂಡಿಲ್ಲ.  ಅವರು ಯಾವಾಗ ತೀರ್ಮಾನ ತೆಗೆದುಕೊಂಡರೂ ಸ್ವಾಗತ ಎಂದು ನುಡಿದರು.

Key words: CM Ibrahim -Former CM- HD Kumaraswamy.