ನಾನಿಲ್ಲ ಅಂದಿದ್ರೆ ಹೆಚ್.ಡಿಕೆ ಚನ್ನಪಟ್ಟಣದಲ್ಲಿ ಗೆಲ್ಲುತ್ತಿದ್ರಾ..? ರಾಜ್ಯಾಧ್ಯಕ್ಷ ಸ್ಥಾನದಿಂದ ವಿಸರ್ಜನೆ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಆಕ್ರೋಶ.

ಬೆಂಗಳೂರು,ಅಕ್ಟೋಬರ್,19,2023(www.justkannada.in):   ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ವಿಸರ್ಜನೆ ಮಾಡಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಇಬ್ರಾಹಿಂ ಕೆಂಡಾಮಂಡಲರಾಗಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ, ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ? ನಾನಿಲ್ಲ ಎಂದಿದ್ರೆ ಚನ್ನಪಟ್ಟಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಗೆಲ್ಲುತ್ತಿದ್ರಾ..? ಎಲ್ಲವನ್ನೂ ನನಗೆ ನನ್ನ ಮಕ್ಕಳಿಗೆ ಅಂದರೇ ಹೇಗೆ ರಾಜ್ಯಾಧ್ಯಕ್ಷ ಸ್ಥಾನದಿಂಧ ವಿಸರ್ಜನೆ ಮಾಡಿದ್ದು ತಪ್ಪು ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ. ನಿಮಗ ಸ್ವಲ್ಪನಾದ್ರೂ ಪಜ್ಞೆ ಇದೆಯಾ..? ನೀವು ಯಾವ ಒಕ್ಕಲಿಗ ನಾಯಕರನ್ನ ಬೆಳೆಸಿದ್ದೀರಿ..? ಎಂದು ವಾಗ್ದಾಳಿ ನಡೆಸಿದರು.

ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ,ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ ಎಂದು ಸಿಎಂ ಇಬ್ರಾಹಿಂ ತಿಳಿಸಿದರು.

Key words:  CM Ibrahim- outrage – dismissal -from – post -JDS- state president