Sunday, August 23, 2026

BDA Apartments

Home Front Page ಇಂದು ಸಿಎಂ ಜನಸ್ಪಂದನ ಕಾರ್ಯಕ್ರಮ: ಹರಿದು ಬಂದ ಜನಸಾಗರ.

ಇಂದು ಸಿಎಂ ಜನಸ್ಪಂದನ ಕಾರ್ಯಕ್ರಮ: ಹರಿದು ಬಂದ ಜನಸಾಗರ.

ಬೆಂಗಳೂರು, ಫೆಬ್ರವರಿ,8,2024(www.justkannada.in):  ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಜನಸಾಗರವೇ ಹರಿದು ಬಂದಿದೆ.

ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದ್ದು, . ಹೀಗಾಗಿ ರಾಜ್ಯದ ಅನೇಕ ಜಿಲ್ಲೆಗಳಿಂದ ಸಾವಿರಾರು ಜನರು ತಮ್ಮ ತಮ್ಮಸಮಸ್ಯೆ ಹೊತ್ತು ವಿಧಾನಸೌಧದತ್ತ ಧಾವಿಸಿದ್ದಾರೆ. ತಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂಬ ಮಹಾದಾಸೆಯಿಂದ ಸಾವಿರಾರು ಮಂದಿ ವಿಧಾನಸೌಧದ ಬಳಿ ಜಮಾಯಿಸಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾಕಷ್ಟು ಸಿದ್ದತೆ ನಡೆಸಲಾಗಿದೆ. ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್ ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ.  ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ , ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ.

Key words: CM- Janaspandan -program- today- people