ಮತ್ತೆ ಗ್ರಾಮ ವಾಸ್ತವ್ಯ ಪುನಾರಂಭಿಸುತ್ತಿದ್ದಾರೆ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂನ್ 02, 2019 (www.justkannada.in): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲು ಮುಂದಾಗಿದ್ದಾರೆ.

ಜೂನ್ 2ನೇ ವಾರದಿಂದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಅವರು ಕೆಲವೊಂದು ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.ಎಚ್.ಡಿ.ಕುಮಾರಸ್ವಾಮಿ

ಎಚ್.ಡಿ.ಕುಮಾರಸ್ವಾಮಿ ಅವರು ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಇಲ್ಲವೇ ಹೋಬಳಿ ಮಟ್ಟದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಒಂದು ತಿಂಗಳಿನಲ್ಲಿ ಕನಿಷ್ಠ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಈ ಕುರಿತು ಅಂತಿಮ ಯೋಜನೆ ತಯಾರು ಮಾಡುತ್ತಿದೆ.