ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಮಹತ್ವದ ಸಭೆ ಆರಂಭ:  ವಿನಾಯಿತಿ ನೀಡುವ ಬಗ್ಗೆ ಇಂದು ನಿರ್ಧಾರ ಸಾಧ್ಯತೆ.

ಬೆಂಗಳೂರು,ಸೆಪ್ಟಂಬರ್,24,2021(www.justkannada.in):  ಕೋವಿಡ್ 3ನೇ ಅಲೆ ನಿಯಂತ್ರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇಂದಿನ ಸಭೆಯಲ್ಲಿ ಹಲವು ವಲಯಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ.

ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಆರೋಗ್ಯ ಸಚಿವ ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್,  ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹಿರಿಯ ಅಧಿಕಾರಿಗಳು ಟಾಸ್ಕ್ ಫೋರ್ಸ್ ಸದಸ್ಯರು ಭಾಗಿಯಾಗಿದ್ದಾರೆ.

ಕೋವಿಡ್ 3ನೇ ಅಲೆ ತಡೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದ್ದು ಇದೇ ವೇಳೆ ಶೇ.50 ರಷ್ಟು ವಿನಾಯಿತಿ ನೀಡಿರುವ ವಲಯಗಳಿಗೆ ಶೇ.100 ರಷ್ಟು ವಿನಾಯಿತಿ ನೀಡುವ ಬಗ್ಗೆ ಚರ್ಚಿಲಾಗುತ್ತದೆ. ಇನ್ನು ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನಗಳ ಭರ್ತಿ ಬಗ್ಗೆಯೂ ಚರ್ಚಿಸಿ ಇಂದು  ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Key words: CM- Meeting – covid -Control- Today- decision -exemption