Sunday, September 20, 2026

BDA Apartments

ರೋಹಿತ್ ವೆಮುಲಾ ಕಾಯ್ದೆ ಕುರಿತು ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ BDA JK_Adv B...
Home Front Page ರೋಹಿತ್ ವೆಮುಲಾ ಕಾಯ್ದೆ ಕುರಿತು ಪರಿಶೀಲಿಸಿ ಕ್ರಮ:  ಸಿಎಂ ಸಿದ್ದರಾಮಯ್ಯ

ರೋಹಿತ್ ವೆಮುಲಾ ಕಾಯ್ದೆ ಕುರಿತು ಪರಿಶೀಲಿಸಿ ಕ್ರಮ:  ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,21,2025 (www.justkannada.in): ರೋಹಿತ್ ವೆಮುಲಾ ಕಾಯ್ದೆ ಜಾರಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Key words: CM Siddaramaiah, Rohith Vemula Act, action