ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿ-ಸಿಎಂ ಸಿದ್ದರಾಮಯ್ಯ

ಚಾಮರಾಜನಗರ,ಏಪ್ರಿಲ್,25,2025 (www.justkannada.in):  ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿನ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ. ಅದಕ್ಕೆ ಸಾಕಷ್ಟು ಉದಾಹರಣೆಗಳು ಕೂಡ ಇವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಬಳಿಕ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮಗಳ  ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಇದರಿಂದ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ. ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದರು.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಇದೊಂದು ರಾಜಕೀಯ ಪ್ರೇರಿತ ದಾಳಿ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು  ಇಡಿ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಏಕೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿಲ್ಲ? ಬಿಜೆಪಿಯವರು ಏನು ಸಾಚಾಗಳ? ಎಂದು ವಾಗ್ದಾಳಿ ನಡೆಸಿದರು.

Key words: Power, strengthened, Visit, Chamarajanagara, CM Siddaramaiah