Saturday, September 19, 2026

BDA Apartments

ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ...
Home Front Page ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ್ನ ಬಿಡಲಿ- ಸಿಎಂ ಸಿದ್ದರಾಮಯ್ಯ...

ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ್ನ ಬಿಡಲಿ- ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು,ಏಪ್ರಿಲ್,26,2025 (www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ದಿವಾಳಿ ಆಗಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ಸುಳ್ಳು ಹೇಳುವುದನ್ನು ಬಿಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಪಾಪರ್ ಆಗಿದ್ದರೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡುತ್ತಿರಲಿಲ್ಲ. ಒಂದೇ ಕ್ಷೇತ್ರದಲ್ಲಿ 480 ಕೋಟಿ ಅಭಿವೃದ್ಧಿ ಯೋಜನೆ ಮಾಡಲಾಗುತ್ತಿತ್ತಾ? ಎಂದು ಪ್ರಶ್ನಿಸಿದರು.

ಇದನ್ನು ಜನ ಅರ್ಥಮಾಡಿಕೊಳ್ಳಬೇಕು. ನಾವು ನುಡಿದಂತೆ ನಡೆದವರು. ನಾವು ಅಭಿವೃದ್ಧಿ ಯೋಜನೆಗಳಿಗೂ ಹಣ ಕೊಡುತ್ತೇವೆ. ಐದು ಗ್ಯಾರಂಟಿ ಯೋಜನೆಗಳಿಗೂ ಕೂಡ ಹಣ ಕೊಡುತ್ತಿದ್ದೇವೆ. ರಾಜ್ಯದಲ್ಲಿ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: BJP, Guarantee, will, not stop, CM, Siddaramaiah, Mysore