ಬೆಂಗಳೂರು, ಮೇ,3,2025 (www.justkannada.in): ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.
ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.
ಈ ವೇಳೆ ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
Key words: Grants, Dalit, backward mutt, CM Siddaramaiah