Thursday, September 17, 2026

BDA Apartments

ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಿಎಂ ಸಿದ್ದರಾಮಯ್ಯ ಕಿಡಿ BDA JK_Ad...
Home Front Page ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಿಎಂ ಸಿದ್ದರಾಮಯ್ಯ ಕಿಡಿ

ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ- ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ  ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ವಿಪಕ್ಷ  ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಬಿಜೆಪಿ ಟೀಕೆ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪೊಲೀಸರ ಅಮಾನತು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸ್ ಅಧಿಕಾರಿಗಳ ಅಮಾನತು ವಿಚಾರದಲ್ಲಿ  ಬಿಜೆಪಿಗರು ರಾಜಕೀಯ ಮಾಡುತ್ತಿದ್ದಾರೆ. ಆದರೆ  ನಾನು ರಾಜಕೀಯ ಮಾಡಲು ಹೋಗಲ್ಲ. ಘಟನೆಗೆ ಯಾರು ಜವಾಬ್ದಾರರು ಇರುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ  ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.vtu

Key words: BJP, politics, police suspension, issue , CM Siddaramaiah