Thursday, August 13, 2026

BDA Apartments

Home Front Page ಪಕ್ಷದಲ್ಲಿ ಆಂತರಿಕ ಜಗಳ, ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಪಕ್ಷದಲ್ಲಿ ಆಂತರಿಕ ಜಗಳ, ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಬೆಂಗಳೂರು, ಜೂನ್ , 27,2025 (www.justkannada.in): ಪಕ್ಷದಲ್ಲಿ ಯಾವುದೇ ಆಂತರಿಕ ಜಗಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಎನ್.ರಾಜಣ್ಣ  ಅವರು ರಾಜ್ಯ ರಾಜಕೀಯದಲ್ಲಿ  ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಹೇಳಿಕೆ ನಿರ್ಲಕ್ಷಿಸಿ

ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು  ತಿಳಿಸಿದರು. ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದರು.vtu

Key words: CM, Siddaramaiah, internal dispute, party