Tuesday, October 27, 2026

Dasara Wishes

Happy Dasara
Home Front Page  ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

 ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ puliyogare,ayyangar WhatsApp 11 16 at 12.03.42 PM

ಮೈಸೂರು,ನವೆಂಬರ್, 20,2024 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 21 ಮತ್ತು 22 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ನವೆಂಬರ್ 21 ರಂದು ಸಂಜೆ 6:30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ.

ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ (ರಿ), ತುಮಕೂರು ಅವರ ವತಿಯಿಂದ ಮೈಸೂರು-ಬೆಂಗಳೂರು ರಸ್ತೆಯಲ್ಲಿನ ಸುಭಾಷ್ ನಗರ ನಂ. 3 ರಲ್ಲಿ ಆಯೋಜಿಸಲಾಗಿರುವ ನೂತನ ಶಾಲೆ “ಕ್ವೆಸ್ಟ್ ಅಕಾಡೆಮಿ”ಯ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಮೈಸೂರು ತಾಲ್ಲೂಕಿನ ವರುಣಾ- ತಿ.ನರಸೀಪುರ ರಸ್ತೆಯ ವರುಣಾ ಕೆರೆ ಮುಂಬಾಗ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30 ಗಂಟೆಗೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ವರುಣಾ-ಸುತ್ತೂರು ರಸ್ತೆಯಲ್ಲಿರುವ ಮರಡಿಹುಂಡಿ ಗೇಟ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಜೆ 6 ಗಂಟೆಗೆ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ (ರಿ.) ಶ್ರೀ ಕಾಗಿನೆಲೆ ಕನಕ ಗುರುಪೀಠ ಶಾಖಾಮಠ ಅವರ ವತಿಯಿಂದ ಸಿದ್ಧಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಆಯೋಜಿಸಲಾಗಿರುವ 2022-23 ಮತ್ತು 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: CM Siddaramaiah, Mysore, tomorrow